ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಕಳೆದ ಬಾರಿ ವಿಚಾರಣೆ ನಡೆದಾಗ ದರ್ಶನ್ ಗೈರು ಹಾಜರಾಗಿದ್ದರು. ಆ ಬಗ್ಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಆರೋಪಿಗಳು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ನ್ಯಾಯಾಧೀಶರು ಖಡಕ್ ವಾರ್ನಿಂಗ್ ನೀಡಿದ್ದರು. ಅದರಂತೆ ಈ ಬಾರಿ ನಟ ದರ್ಶನ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.