ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವ ಪುರುಷಾರ್ಥಕ್ಕೆ ಸಮಾವೇಶ ಮಾಡ್ತಿದ್ದೀರಿ ಎಂದು ಬಿ.ವೈ ವಿಜಯೇಂದ್ರ ಪ್ರಶ್ನೆ ಮಾಡಿದ್ದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಉತ್ತರ ನೀಡಿದ್ದಾರೆ.
ಯಾವ ಪುರುಷಾರ್ಥಕ್ಕಾಗಿ ಸಮಾವೇಷ ಮಾಡ್ತಿದ್ದೀರಿ? ಬೆಲೆ ಏರಿಕೆಗಾಗಿಯಾ, ಭ್ರಷ್ಟಾಚಾರ ತಾಂಡವಾಡುತ್ತಿದೆ ಅದಕ್ಕಾಗಿಯಾ, ಹಿಂದೂ ಕಾರ್ಯಕರ್ತರ ಹತ್ಯೆಗಳು ಆಗುತ್ತಿವೆ ಇದಕ್ಕಾಗಿಯಾ? ಎಂದು ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.
ಇದಕ್ಕೆ ಡಿಕೆಶಿ ಉತ್ತರ ನೀಡಿದ್ದು, ಕಂದಾಯ ಇಲಾಖೆಯ ಮೂಲಕ ನೀಡುತ್ತಿರುವ ಈ ಭೂ ಗ್ಯಾರಂಟಿ ಇತಿಹಾಸದ ಪುಟ ಸೇರಲಿದೆ. ಈ ರೀತಿಯ ಹಲವು ಕಾರ್ಯಕ್ರಮಗಳನ್ನು ಎರಡು ವರ್ಷಗಳಲ್ಲಿ ಮಾಡಿದ್ದೇವೆ, ನಿಮ್ಮ ಅವಧಿಯಲ್ಲಿ ಆಗದ ಕೆಲಸಗಳು ನಮ್ಮ ಅವಧಿಯಲ್ಲಾಗಿದೆ. ಅದಕ್ಕಾಗಿ, ಸಾಧನಾ ಸಮಾವೇಶ ಮಾಡುತ್ತಿದ್ದೇವೆ ಎಂದಿದ್ದಾರೆ.
ಪ್ರತಿಯೊಬ್ಬ ವ್ಯಕ್ತಿಗೂ ತಾನು ವಾಸವಿರುವ ಜಾಗವನ್ನು ತನ್ನದಾಗಿಸಿಕೊಳ್ಳುವ ಆಸೆ ಇರುತ್ತದೆ. ಪರಿಶಿಷ್ಟರು, ಹಿಂದುಳಿದವರು ಹಾಗೂ ಭೂರಹಿತವಾಗಿರುವವರು ಕಳೆದ ಹಲವು ವರ್ಷಗಳಿಂದ ದಾಖಲೆ ಇಲ್ಲದೆ ಮನೆ ಕಟ್ಟಿಕೊಂಡು ಪರದಾಡುತ್ತಿದ್ದರು. ಹೀಗಾಗಿ ನಮ್ಮ ಸರ್ಕಾರ ಕಂದಾಯ ಇಲಾಖೆಯ ಮೂಲಕ ಇದಕ್ಕೆ ಪರಿಹಾರ ನೀಡಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.