ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಹೊರವಲಯದ ಹಳ್ಳಿಮಾಳ ಸಮೀಪ ದರ್ಗಾಗೆ ಬಂದಿದ್ದ ಬಾಲಕ ನೀರಿನಲ್ಲಿ ಆಟವಾಡಲು ಹೋಗಿ ಅರ್ಕಾವತಿ ನದಿಯಲ್ಲಿ ಕೊಚ್ಚಿಹೋದ ಘಟನೆ ನಡೆದಿದೆ.
ಮೊಹಮ್ಮದ್ ಸೈಫ್ (9) ಮೃತಪಟ್ಟ ಬಾಲಕ. ಅರ್ಕಾವತಿ ನದಿ ಪಕ್ಕದಲ್ಲಿರುವ ದರ್ಗಾಗೆ ರಿಯಾಜ್ ಮತ್ತು ಸಮೀಮ್ ಭಾನು ತಮ್ಮ ಪುತ್ರನ ಜೊತೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ಮೊಹಮ್ಮದ್ ಸೈಫ್ ಕಾಲುಜಾರಿ ನದಿಗೆ ಬಿದ್ದು ಕೊಚ್ಚಿಹೋಗಿದ್ದಾನೆ.
ಬಾಲಕನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.