ಹಕ್ಕು ಪತ್ರ ಜಾರಿ ಮೂಲಕ ಆರನೇ ಗ್ಯಾರಂಟಿ ಜಾರಿ ಮಾಡಿದ್ದೇವೆ: ರಾಹುಲ್‌ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಕ್ಕು ಪತ್ರ ನೀಡುವುದರಲ್ಲಿ ಕರ್ನಾಟಕ ದೇಶದ ಮೊದಲ ರಾಜ್ಯವಾಗಬೇಕು. ಹಕ್ಕು ಪತ್ರ ನೀಡುವ ಮೂಲಕ ಆರನೇ ಗ್ಯಾರಂಟಿ ಜಾರಿ ಮಾಡಿದ್ದೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ  ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರಕ್ಕೆ 2 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಮಾತನಾಡಿ, ನಾವು ಐದು ಗ್ಯಾರಂಟಿಗಳ ಜೊತೆಗೆ ಬಡ ಜನರಿಗೆ ಹಕ್ಕು ಪತ್ರ ಕೊಡಬೇಕು ಎಂದುಕೊಂಡಿದ್ದೇವೆ. ಇಲ್ಲಿ ಎಲ್ಲಾ ಜಾತಿ ಧರ್ಮದವರಿದ್ದಾರೆ.

ಇವರಿಗೆ ಹತ್ತಾರು ವರ್ಷದಿಂದ ಆಸ್ತಿಗಳ ಪತ್ರ ಇರಲಿಲ್ಲ. ಈ ವಿಷಯದ ಬಗ್ಗೆ ನಮ್ಮ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿದೆ. ಇಂದು ಅತ್ಯಂತ ಸಂತಸದಿಂದ ಹೇಳುತ್ತಿದ್ದೇನೆ. ಇವತ್ತು ನಾವು ಅವರಿಗೆ ಹಕ್ಕು ಪತ್ರ ಕೊಟ್ಟಿದ್ದೇವೆ. ಒಂದು ಲಕ್ಷ ಕುಟುಂಬಕ್ಕೆ ನಾವು ಅವರ ಆಸ್ತಿಗಳ ಹಕ್ಕು ವರ್ಗಾವಣೆ ಮಾಡಿದ್ದೇವೆ. ಇಂದಿರಾಗಾಂಧಿ ಅವರು ಕನಸು ಕೂಡಾ ಇದಾಗಿತ್ತು. ಅದನ್ನ ಇವತ್ತು ನನಸು ಮಾಡಿದ್ದೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!