ಹೊಸದಿಗಂತ ವರದಿ, ಮಂಗಳೂರು:
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜಡಿ ಮಳೆಗೆ ಜಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ.
ಇತ್ತ ನಗರ ಅಪ್ಸರಾ ಐಸ್‌ಕ್ರೀಮ್ ಮಳಿಗೆಗೆ ಭಾರೀ ಮಳೆ ನೀರು ಮತ್ತು ಕೆಸರು ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಲಕ್ಷಾಂತರ ರೂ. ಫ್ರಿಡ್ಜ್, ಕೂಲರ್‌ಗಳಿಗೆ ಹಾನಿಯಾಗಿದೆ. ಅವೈಜ್ಞಾನಿಕ ಚರಂಡಿ ನಿರ್ಮಾಣ ಮತ್ತು ಏಕಾಏಕಿ ಗಾಳಿ ಮಳೆ ಜೊತೆ ಕೆಸರು ಮಿಶ್ರಿತ ನೀರು ಬಂದ ಕಾರಣ ತಗ್ಗು ಪ್ರದೇಶದ ಅಂಗಡಿಗಳು ಮನೆಗಳು ಜಲಾಮಯವಾಗಿದೆ.
ಮಣಿಪಾಲ, ಪರ್ಕಳ ಭಾಗದಲ್ಲಿ ವಿಪರೀತ ಮಳೆಯಾದ ಕಾರಣ ಬೆಟ್ಟದ ಮೇಲಿಂದ ಹರಿದ ಭಾರೀ ಪ್ರಮಾಣದ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದೆ. ಮಣಿಪಾಲ- ಲಕ್ಷ್ಮೀಂದ್ರ ನಗರ ಇಳಿಜಾರು ಪ್ರದೇಶವು ಕೆಸರು ನೀರಿನಿಂದ ಜಲಾವೃತವಾಗಿದೆ. ಉಡುಪಿ ಮಣಿಪಾಲ ರಸ್ತೆಯಲ್ಲಿ ಪೊಲೀಸರು ಏಕಮುಖ ಸಂಚಾರ ವ್ಯವಸ್ಥೆ ಮಾಡಿದ್ದು, ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.