ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ಇರೋವರೆಗೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಸರ್ಕಾರ ಅಧಿಕಾರ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ನಡೆದ ‘ಸಮರ್ಪಣೆ ಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಡಿಕೆಶಿ, ಎರಡು ವರ್ಷದ ಹಿಂದೆ ಸಿದ್ದರಾಮಯ್ಯ ಮತ್ತು ನನ್ನ ಮೇಲೆ ಭರವಸೆ ಇಟ್ಟು ಮತ ಹಾಕಿದ್ದೀರಿ. 136 ಸ್ಥಾನ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಮೊದಲು ಐದು ಗ್ಯಾರಂಟಿ, ಈಗ ಹಕ್ಕು ಪತ್ರ ಮೂಲಕ ಆರನೇ ಗ್ಯಾರಂಟಿ ನೀಡಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೆ ಗ್ಯಾರಂಟಿ ಸ್ಕೀಮ್ ನಿಲ್ಲೋದಿಲ್ಲ ಎಂದು ಭರವಸೆ ನೀಡಿದ್ದಾರೆ.