2 ವರ್ಷಗಳಲ್ಲಿ ಕೊಟ್ಟ ಭರವಸೆಗಳಲ್ಲಿ 142 ಈಡೇರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆ ‘ಸಮರ್ಪಣೆ ಸಂಕಲ್ಪ’ ಸಮಾವೇಶ ಆಯೋಜಿಸಲಾಗಿತ್ತು. ಇದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!