ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಗೆ ಜಾಮೀನು ಮಂಜೂರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನವಾಗಿದ್ದ ನಟಿ ರನ್ಯಾ ರಾವ್ ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಮಂಗಳವಾರ ಜಾಮೀನು ನೀಡಿದೆ.

ಮಾರ್ಚ್ 3 ರಂದು ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಪುತ್ರಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.

ಅಧಿಕಾರಿಗಳು ವಶಪಡಿಸಿಕೊಂಡ ಚಿನ್ನದ ಮೌಲ್ಯ 12.56 ಕೋಟಿ ರೂ.ಗಳಷ್ಟಿತ್ತು. ನಂತರದ ತನಿಖೆಯಲ್ಲಿ ರನ್ಯಾ 2023 ಮತ್ತು 2025 ರ ನಡುವೆ 34 ಬಾರಿ ದುಬೈಗೆ ಒಬ್ಬಂಟಿಯಾಗಿ ಪ್ರಯಾಣಿಸಿದ್ದಾರೆ ಎಂದು ತಿಳಿದುಬಂದಿದೆ,

ಆಕೆಯ ನಿವಾಸದ ಮೇಲೆ ನಡೆದ ದಾಳಿಯಲ್ಲಿ 2.06 ಕೋಟಿ ರೂ. ಮತ್ತು 2.67 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಯಿತು. ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 135 ಮತ್ತು 104 ರ ಬಹು ನಿಬಂಧನೆಗಳ ಅಡಿಯಲ್ಲಿ ಆಕೆಯ ಮೇಲೆ ಆರೋಪ ಹೊರಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!