ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಮಾತನಾಡೋದಿಲ್ಲ ನಾನು ಇರೋದು ಭಾರತದಲ್ಲಿ ಕನ್ನಡ ಮಾತನಾಡಬೇಕು ಎಂಬ ರೂಲ್ಸ್ ಇಲ್ಲ ಎಂದು ದರ್ಪದಿಂದ ಮಾತನಾಡಿದ್ದ ಬ್ಯಾಂಕ್ ಮ್ಯಾನೇಜರ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕನ್ನಡಿಗರನ್ನ ಕೆಣಕುವ ಕೆಲಸ ಮಾಡಿದ ಮ್ಯಾನೇಜರ್ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಆನೇಕಲ್ ಎಸ್‌ಬಿಐ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದು, ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಧಿಮಾಕು ತೋರಿದ್ದ ಮ್ಯಾನೇಜರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಇದರ ಬೆನ್ನಲ್ಲೇ ಈ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿರುವ ಎಸ್‌ಬಿಐ ಶಾಖೆಯ ವ್ಯವಸ್ಥಾಪಕರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರನ್ನು ಕಡೆಗಣಿಸಿರುವ ವರ್ತನೆ ತೀವ್ರ ಖಂಡನೀಯವಾಗಿದೆ ಎಂದು ಕಿಡಿಕಾರಿದ್ದಾರೆ.
ಮುಂದುವರಿದು ತಮ್ಮ ಟ್ವೀಟ್‌ನಲ್ಲಿ ಸಿಎಂ ಸಿದ್ದರಾಮಯ್ಯ, ಈ ಪ್ರಕರಣದಲ್ಲಿ ಎಸ್‌ಬಿಐ ಶಾಖೆಯ ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಎಸ್‌ಬಿಐ ಬ್ಯಾಂಕ್‌ನ ಮೇಲಾಧಿಕಾರಿಗಳು ಕೈಗೊಂಡ ತ್ವರಿತ ಕ್ರಮವನ್ನು ನಾವು ಪ್ರಶಂಸಿಸುತ್ತೇವೆ. ಹೀಗಾಗಿ ಈ ವಿಷಯವನ್ನು ಇಲ್ಲಿಗೆ ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಬಹುದು. ಆದರೆ, ಇಂತಹ ಘಟನೆಗಳು ಮರುಕಳಿಸಬಾರದು. ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ಹೇಳಿದ್ದಾರೆ.