MI vs DC ಪಂದ್ಯ ಮಳೆಯಿಂದ ರದ್ದಾದರೆ ಏನಾಗುತ್ತದೆ? ಪ್ಲೇಆಫ್ ಪ್ರವೇಶ ಯಾರಿಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಸೀಸನ್‌ನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊರಹೋಗುವ ಹಂತದಲ್ಲಿದೆ. ಅಗ್ರ 4ರಲ್ಲಿ ಸ್ಥಾನ ಪಡೆಯಲು ಫ್ರಾಂಚೈಸಿ ತನ್ನ ಉಳಿದ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಮುಂದಿನ ಒಂದು ಪಂದ್ಯದಲ್ಲಿ ಸೋಲು ಕಂಡರೂ ಅಕ್ಷರ್ ಪಟೇಲ್ ನೇತೃತ್ವದ ತಂಡಕ್ಕೆ ಮುಂದಿನ ಸುತ್ತಿಗೆ ಅರ್ಹತೆ ಪಡೆಯುವುದು ತುಂಬಾ ಕಷ್ಟವಾಗಲಿದೆ. ಬುಧವಾರ ಮುಂಬೈ ಇಂಡಿಯನ್ಸ್  ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಮಳೆ ಅಡ್ಡಿ ಉಂಟುಮಾಡುವ ನಿರೀಕ್ಷೆಯಿರುವುದರಿಂದ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದೀಗ ಆತಂಕ ಶುರುವಾಗಿದೆ.

ಮುಂದಿನ ನಾಲ್ಕು ದಿನಗಳವರೆಗೆ ಮುಂಬೈನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಯೂವೆದರ್ ಪ್ರಕಾರ, ನಗರದಲ್ಲಿ ಮಳೆಯಾಗುವ ಸಾಧ್ಯತೆ ಶೇ 80 ರಷ್ಟು ಇದ್ದು, ಒಟ್ಟು 1.5 ಗಂಟೆಗಳ ಮಳೆಯಾಗುವ ನಿರೀಕ್ಷೆಯಿದೆ. ರಾತ್ರಿಯ ಸಮಯದಲ್ಲಿ ಮಳೆಯಾಗುವ ಸಾಧ್ಯತೆ ಶೇ 25ಕ್ಕೆ ಇಳಿಯಲಿದ್ದರೂ, ಹವಾಮಾನ ಪರಿಸ್ಥಿತಿಗಳು ಯಾವ ಕ್ಷಣದಲ್ಲಿ ಬೇಕಾದರೂ ಬದಲಾಗುವ ಸಾಧ್ಯತೆ ಇದೆ.

ಮುಂಬೈ ಮತ್ತು ಡಿಸಿ ನಡುವಿನ ಪಂದ್ಯ ಮಳೆಯಿಂದ ರದ್ದಾದರೆ, ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡ ಪ್ಲೇಆಫ್‌ಗೆ ಹತ್ತಿರವಾಗಲಿದೆ. ಮುಂಬೈ ಈಗಾಗಲೇ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗಿಂತ ಒಂದು ಪಾಯಿಂಟ್ ಮುಂದಿದೆ. ಇಂದು ನಡೆಯಲಿರುವ ಪಂದ್ಯ ಮಳೆಯಿಂದ ರದ್ದಾದರೆ, ಎರಡೂ ತಂಡಗಳು ತಲಾ ಒಂದು ಪಾಯಿಂಟ್ ಪಡೆಯುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಮುಂಬೈನ 15 ಅಂಕಗಳಿಗೆ ಏರಿದರೆ, ಡೆಲ್ಲಿ 14 ಅಂಕ ಪಡೆದಂತಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!