ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್ ನಗರ ವ್ಯಾಪ್ತಿಯ ಹಯಾತ್‌ನಗರ್ ಕಂಟ್ಲೂರ್‌ನಲ್ಲಿ ಭಯಾನಕ ಅಪಘಾತವೊಂದು ಸಂಭವಿಸಿದೆ.
ಅತಿ ವೇಗವಾಗಿ ಬಂದ ಕಾರೊಂದು, ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದ ಭಯಾನಕ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದರ ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ವ್ಯಕ್ತಿಯ ಸ್ಥಿತಿಯೂ ಗಂಭೀರವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸಂಬಂಧಿಕರ ಮನೆಯ ಸಮಾರಂಭದಲ್ಲಿ ಭಾಗಿಯಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ