ರಾಜ್ಯದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೆರೆಯ ರಾಜ್ಯ ಆಂಧ್ರಪ್ರದೇಶಕ್ಕೆ ರಾಜ್ಯದಿಂದ ನಾಲ್ಕು ಕುಮ್ಕಿ ಆನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸ್ತಾಂತರಿಸಿದ್ದಾರೆ.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಆನೆಗಳನ್ನು ಹಸ್ತಾಂತರ ಮಾಡಿದರು. ಈ ವೇಳೆ ರಾಜ್ಯದಿಂದ ಆಂಧ್ರಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ – ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ‌. ಜಾರ್ಜ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಹಾಜರಿದ್ದರು. ಪ್ರಸ್ತುತ ಆಂಧ್ರಪ್ರದೇಶಕ್ಕೆ ರಾಜ್ಯ ಸರ್ಕಾರ ನಾಲ್ಕು ಆನೆಗಳನ್ನು ಹಸ್ತಾಂತರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆರಡು ಆನೆಗಳನ್ನು ಹಸ್ತಾಂತರಿಸಲಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!