ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆರಿಗೆ ವಂಚನೆ ಪ್ರಕರಣದಲ್ಲಿ ನಟ ಅರ್ಜುನ್ ರಾಂಪಾಲ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದ ಸ್ಥಳೀಯ ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.
ವಾರಂಟ್ ರದ್ದು ಕೋರಿ ನಟ ಅರ್ಜುನ್ ರಾಂಪಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅದ್ವೈತ್ ಸೇಥ್ನಾ ಅವರ ರಜಾ ಕಾಲದ ಪೀಠ, ಮೇ 16 ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿದ ಆದೇಶ ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿದೆ.
ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 276C(2) ಅಡಿಯಲ್ಲಿನ ಅಪರಾಧಕ್ಕಾಗಿ ಐ-ಟಿ ಇಲಾಖೆ ತನಿಖೆ ಆರಂಭಿಸಿದ 2019 ರ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಮ್ಮ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಅರ್ಜುನ್ ರಾಂಪಾಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ರಾಮ್‌ಪಾಲ್ ವಿರುದ್ಧ ದಾಖಲಾಗಿರುವ ಅಪರಾಧವು ಗರಿಷ್ಠ ಮೂರು ವರ್ಷಗಳ ಶಿಕ್ಷೆಗೆ ಅರ್ಹವಾಗಿದ್ದು, ಅದು ಜಾಮೀನು ನೀಡಬಹುದಾದ ಅಪರಾಧ ಎಂದು ನ್ಯಾಯಮೂರ್ತಿ ಸೇತ್ನಾ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.