Bottom to Playoff.. ಅಮೋಘ ಪ್ರದರ್ಶನದ ಮೂಲಕ ಕೊನೆಗೂ ಪ್ಲೇ-ಆಫ್‌ಗೆ ಲಗ್ಗೆ ಇಟ್ಟ ಮುಂಬೈ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್‌ ನಿನ್ನೆ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ಲೇ-ಆಫ್‌ಗೆ ಲಗ್ಗೆ ಇಟ್ಟಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತ ಮುಂಬೈ ಮೊದಲು ಬ್ಯಾಟಿಂಗ್‌ ಮಾಡಿ 181 ರನ್‌ ಟಾರ್ಗೆಟ್‌ ನೀಡಿತು. ಗುರಿ ಬೆನ್ನತ್ತಿದ ಡೆಲ್ಲಿ ತಂಡ ಬ್ಯಾಟಿಂಗ್‌ ವೈಫಲ್ಯದಿಂದ 121 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು.

ಈ ಮೂಲಕ ಮುಂಬೈ ಇಂಡಿಯನ್ಸ್‌ ಪ್ಲೇ-ಆಫ್‌ಗೆ ಪ್ರವೇಶಿಸಿದ್ದು, ಹೀನಾಯ ಸೋಲು ಕಂಡ ಡೆಲ್ಲಿ ಕ್ಯಾಪಿಟಲ್ಸ್‌ ಐಪಿಎಲ್‌ ನ ಈ ಆವೃತ್ತಿಯಿಂದ ಹೊರಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!