ಹೊಸದಿಗಂತ ತುಮಕೂರು:
ನಗರದ ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ಎರಡನೇ ದಿನವೂ ದಾಖಲೆ ಪರಿಶೀಲನೆ ಕಾರ್ಯ ಮುಂದುವರೆಸಿದ್ದಾರೆ.
ಬಹುತೇಕ ಮಧ್ಯ ರಾತ್ರಿವರೆಗೂ ಇಡಿ ಅಧಿಕಾರಿಗಳು ನಿರಂತರವಾಗಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇಂದು ಗುರುವಾರ ಬೆಳಗ್ಗೆಯಿಂದಲೂ ಇಡಿ ಅಧಿಕಾರಿಗಳು ಕಾಲೇಜಿನ ಆವರಣದಲ್ಲಿ ಮೊಕ್ಕಾಮ್ ಹೂಡಿದ್ದು, ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನು ಕೂಡ ನಿಯೋಜನೆ ಮಾಡಲಾಗಿದೆ.
ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆ ಯಾರನ್ನು ಒಳಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗುತ್ತಿದೆ. ಪ್ರತಿಯೊಬ್ಬರ ಬಳಿ ಸೆಕ್ಯೂರಿಟಿ ಗಾರ್ಡ್ ಗಳು ಐಡಿ ಕಾರ್ಡ್ ಪರೀಶೀಲನೆ ಮಾಡಿ ಒಳಗೆ ಬಿಡುತ್ತಿದ್ದಾರೆ.