ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಮಿಡಿ ಕಿಲಾಡಿ ಸ್ಟಾರ್ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ಕಾಮಿಡಿ ಕಿಲಾಡಿಯ ಸಹ ಕಲಾವಿದೆಯಿಂದಲೇ ಅತ್ಯಾಚಾರ ಕೇಸ್ ದಾಖಲಾಗಿದೆ. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಇದೀಗ ಹುಡುಕಾಟ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.