ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ನಾಡಿನ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್‌ಗೆ ತೆಲುಗು ನಟಿ ತಮನ್ನಾ ಭಾಟಿಯಾ ರಾಯಭಾರಿಯಾಗಿದ್ದಾರೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧಿಕೃತ ರಾಯಭಾರಿಯಾಗಿ ತಮನ್ನಾ ನೇಮಕಗೊಂಡಿದ್ದಾರೆ.
2 ವರ್ಷ 2 ದಿನದ ಅವಧಿಗೆ ರಾಯಭಾರಿಯಾಗಲು ನಟಿ ಬರೋಬ್ಬರಿ 6.20 ಕೋಟಿ ಸಂಭಾವನೆ ಪಡೆದಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.