ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಳ ಬಂಧನ ಅವಧಿಯನ್ನು ನ್ಯಾಯಾಲಯ ನಾಲ್ಕು ದಿನಗಳವರೆಗೆ ವಿಸ್ತರಿಸಿದೆ.
ಬೆಳಿಗ್ಗೆ 9:30ಕ್ಕೆ ಹಿಸಾರ್ ಪೊಲೀಸರು ಜ್ಯೋತಿಯನ್ನು ನ್ಯಾಯಾಲಯಕ್ಕೆ ಕರೆತಂದರು. ನಂತರ ಹಿಸಾರ್ ಪೊಲೀಸರು ಆಕೆಯನ್ನು 4 ದಿನಗಳ ಕಸ್ಟಡಿಗೆ ಪಡೆದರು.
ಜ್ಯೋತಿ ಪರವಾಗಿ ಪ್ರಕರಣದ ವಾದ ಮಂಡಿಸಲು ಇನ್ನೂ ಯಾವುದೇ ವಕೀಲರನ್ನು ನೇಮಿಸಲಾಗಿಲ್ಲ. ಜ್ಯೋತಿಯ ತಂದೆ ಹರೀಶ್ ಮಲ್ಹೋತ್ರಾ ಮಾತನಾಡಿ, ನನ್ನ ಬಳಿ ವಕೀಲರನ್ನು ನೇಮಿಸಿಕೊಳ್ಳಲು ಹಣವಿಲ್ಲ ಎಂದು ಹೇಳಿದ್ದಾರೆ. ನನಗೆ ವಕೀಲರನ್ನು ಹೇಗೆ ನೇಮಿಸಿಕೊಳ್ಳಬೇಕೆಂದು ತಿಳಿದಿಲ್ಲ. ಕಳೆದ ಐದು ದಿನಗಳಿಂದ ಮಾಧ್ಯಮ ಮತ್ತು ಪೊಲೀಸರನ್ನು ಹೊರತುಪಡಿಸಿ ಯಾರೂ ನನ್ನ ಮನೆಗೆ ಬರುತ್ತಿಲ್ಲ ಎಂದು ಹೇಳಿದರು.