ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಮಾತನಾಡಿರುವ ಡಿ.ಕೆ.ಶಿವಕುಮಾರ್, ಇವತ್ತಿನ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಅಧಿಕೃತವಾಗಿ ಈ ಸಂಬಂಧ ಆದೇಶ ಹೊರ ಬೀಳಲಿದೆ. ಇನ್ಮುಂದೆ ರಾಮನಗರ ಹೆಡ್ ಕ್ವಾಟ್ರಸ್ ಆಗಿರಲಿದೆ ಎಂದು ತಿಳಿಸಿದ್ದಾರೆ.