ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀನಲೆ ನಡೆಸಿದ್ದಾರೆ.
ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ , ಕೆಲ ಸಚಿವರು ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಇತ್ತ ಪರಮೇಶ್ವರ್ ವಿರುದ್ಧ ಕಾಂಗ್ರೆಸ್ನ ಒಂದು ಗುಂಪು ದೂರು ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ.
ಗದಗದಲ್ಲಿ ಇಂದು(ಮೇ 22) ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಜೋಶಿ, ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ. ಪರಮೇಶ್ವರ್ ವಿರುದ್ಧ ಕಾಂಗ್ರೆಸ್ನ ಒಂದು ಗುಂಪು ದೂರು ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 2013ರಲ್ಲಿ ಡಾ.ಜಿ.ಪರಮೇಶ್ವರ್ರನ್ನು ಸೋಲಿಸಿದ್ದು ಯಾರು? ಡಾ.ಜಿ.ಪರಮೇಶ್ವರ್ರನ್ನು ಇದೇ ಸಿದ್ದರಾಮಯ್ಯ ಸೋಲಿಸಿದ್ದರು. ಚಿನ್ನ ಕಳ್ಳತನ ಸೇರಿ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ಮಾಡುವಂತೆ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದು ಯಾರು? ನಮಗೆ ಪರಮೇಶ್ವರ್ ಮೇಲೆ ಗೌರವ ಇದೆ, ಸಭ್ಯ ರಾಜಕಾರಣಿ. ಏನಾಗಿದೆ ಅನ್ನೋದನ್ನು ಇಡಿ ಅಧಿಕಾರಿಗಳು ಹುಡುಕುತ್ತಿದ್ದಾರೆ ಎಂದರು.
ಯಾರು ಕಳುಹಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯಗೂ ಗೊತ್ತಿದೆ. ಮಾಹಿತಿ ಸಿಕ್ಕಾಗ ಇಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಆಗಲಿದೆ ಎಂದು ಜೋಶಿ ಮಾತು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಮುನ್ನುಡಿ ಬರೆದಂತೆ ಆಗಿದೆ.