ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ: ಕೋಬ್ರಾ ಕಮಾಂಡೋ ಹುತಾತ್ಮ, ಓರ್ವ ನಕ್ಸಲೈಟ್ ಹತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್​ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದ ನಕ್ಸಲ್​ ವಿರೋಧಿ ಕಾರ್ಯಾಚರಣೆಯಲ್ಲಿ ಓರ್ವ ನಕ್ಸಲ್​ನನ್ನು ಹತ್ಯೆ ಮಾಡಲಾಗಿದ್ದು, ಈ ವೇಳೆನಡೆದ ಗುಂಡಿನ ಚಕಮಕಿಯಲ್ಲಿ ಸಿಆರ್​ಪಿಎಫ್​ನ ಕೋಬ್ರಾ ಕಮಾಂಡೋ ಹುತಾತ್ಮರಾಗಿದ್ದಾರೆ.

ಜಿಲ್ಲೆಯ ಉಸೂರ್​ ಪೊಲೀಸ್​ ಠಾಣೆ ವ್ಯಾಪ್ತಿಯ ಟುಮ್ರೆಲ್​ ಪ್ರದೇಶದಲ್ಲಿ ಕಾರ್ಯಾಚರಣೆ ಸಾಗಿದ್ದು, ಸಿಆರ್​ಪಿಎಫ್​ನ 21ನೇ ಬಟಾಲಿಯನ್​ ಕೋಬ್ರಾ ಘಟಕ ಮತ್ತು ಛತ್ತೀಸ್​ಗಢ ಪೊಲೀಸ್​ ಡಿಆರ್​ಜಿ ಮತ್ತು ಎಸ್​ಟಿಎಫ್​ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಕೋಬ್ರಾ ಕಮಾಂಡೋ ಹುತಾತ್ಮನಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮಾವೋವಾದಿಯನ್ನು ಹತನಾಗಿದ್ದು, ಆತನ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!