ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಣಾಸಿಯ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (UP ATS) ಬಂಧಿಸಿದೆ.
ತುಫೈಲ್ ಬಂಧಿತ ಆರೋಪಿ. ಪಾಕ್ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ತುಫೈಲ್ ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ. ರಾಜ್‌ಘಾಟ್, ನಮೋ ಘಾಟ್, ಜ್ಞಾನವಾಪಿ ಮಸೀದಿ, ರೈಲ್ವೆ ನಿಲ್ದಾಣ ಮತ್ತು ಕೆಂಪು ಕೋಟೆ (Red Fort) ಸೇರಿದಂತೆ ಆಯಕಟ್ಟಿನ ಸ್ಥಳಗಳ ಫೋಟೋ ಮತ್ತು ಮಾಹಿತಿಯನ್ನ ಹಂಚಿಕೊಂಡಿದ್ದಾನೆ ಅನ್ನೋದು ತನಿಖೆ ಸಮಯದಲ್ಲಿ ತಿಳಿದುಬಂದಿದೆ.
ತೆಹ್ರೀಕ್-ಇ-ಲಬ್ಬೈಕ್ ಉಗ್ರ ಸಂಘಟನೆಯ ನಾಯಕ ಮೌಲಾನಾ ಸಾದ್ ರಿಜ್ವಿಯ ಉಪನ್ಯಾಸ ವಿಡಿಯೋಗಳನ್ನ ಹಂಚಿಕೊಳ್ಳುತ್ತಿದ್ದ. ಬಾಬರಿ ಮಸೀದಿ ಧ್ವಂಸಕ್ಕೆ ಸೇಡು ತೀರಿಸಿಕೊಳ್ಳಲು ಮತ್ತು ಶರಿಯಾ ಕಾನೂನು ಹೇರಿಕೆಯನ್ನು ಉತ್ತೇಜಿಸುವ ಪ್ರಚೋದನಕಾರಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದ ಅನ್ನೋದು ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಇದರೊಂದಿಗೆ ದೇಶದ ವಿವಿಧೆಡೆ ಬಂಧಿತ ಪಾಕ್ ಬೇಹುಗಾರರ (Spy) ಸಂಖ್ಯೆ 12ಕ್ಕೆ ಏರಿಕೆಯಾಗಿದೆ.