ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾವು ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ ಕೊಟ್ಟಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡರು.
ವಿಜಯಪುರದ ಕೊಲ್ಹಾರ ಪಟ್ಟಣದಲ್ಲಿ ಹೆರಾಲ್ಡ್ ಕೇಸಲ್ಲಿ ಡಿಕೆ ಬ್ರದರ್ಸ್ ಹೆಸರು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೌದು, ನ್ಯಾಷನಲ್ ಹೆರಾಲ್ಡ್‌ಗೆ ನಾನು 25 ಲಕ್ಷ, ನನ್ನ ತಮ್ಮ ಡಿ.ಕೆ.ಸುರೇಶ್ 25 ಲಕ್ಷ ಕೊಟ್ಟಿದ್ದೇವೆ. ಅದು ನಮ್ಮ ಪತ್ರಿಕೆ. ಕೊಟ್ಟರೆ ಅದರಲ್ಲಿ ತಪ್ಪೇನಿದೆ? ನಾವು ಕೊಟ್ಟಿಲ್ಲ ಅಂತಾ ಹೇಳ್ತಿಲ್ಲ ಅಲ್ವಾ ಎಂದು ತಿಳಿಸಿದರು.
ರನ್ಯಾ ರಾವ್ ಚಿನ್ನದ ವಿಚಾರ ಹೇಳಿದ್ದು ಕಾಂಗ್ರೆಸ್ ನಾಯಕ ಎಂಬ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಮೆಂಟ್ಲು. ಪಾಪ ಮೆಂಟ್ಲು ಹೆಚ್ಚು ಕಡಿಮೆ ಆಗಿರಬೇಕು. ಕುಮಾರಸ್ವಾಮಿಗೆ ತಲೆ ಸರಿ ಇಲ್ಲ. ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ ಎಂದು ಹೆಚ್ಡಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.