ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ತ್ಯಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು.
ಇ.ಡಿ ದಾಳಿ ಕುರಿತು ,ಮಾತನಾಡಿದ ಅವರು, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ ಎಂದು ಆರೋಪಿಸಿದರು.