ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ವಿಶೇಷ ಎಂದರೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಲ್ಲದೆ, ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ವಿದೇಶಿ ಸರಣಿ ಆಡಲು ಮುಂದಾಗುತ್ತಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡವನ್ನು ಯುವ ಆಟಗಾರ ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ.
ಇನ್ನು ತಂಡದಲ್ಲಿ ಆರಂಭಿಕರಾಗಿ ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಕಾಣಿಸಿಕೊಂಡಿದ್ದಾರೆ.
ಮಧ್ಯಮ ಕ್ರಮಾಂಕದ ಬ್ಯಾಟರ್ಗಳಾಗಿ ಕೆಎಲ್ ರಾಹುಲ್, ಕರುಣ್ ನಾಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ.
ಆಲ್ರೌಂಡರ್ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.
ಯಾರೆಲ್ಲ ಇದ್ದಾರೆ ತಂಡದಲ್ಲಿ:
ಶುಭಮನ್ ಗಿಲ್ (ನಾಯಕ), ರಿಷಬ್ ಪಂತ್ (WK ಮತ್ತು VC), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬಿ ಸಿಮ್ರಾಜ್ ಅರ್ಷದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್.