ಕೇರಳ, ಕರ್ನಾಟಕ , ಗೋವಾದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳಕ್ಕೆ ಇಂದು ಮುಂಗಾರು ಪ್ರವೇಶವಾಗಿದೆ. ಇದರ ನಡುವೆ ಕರ್ನಾಟಕ ಮತ್ತು ಕೇರಳ ಸೇರಿದಂತೆ ಹಲವಾರು ದಕ್ಷಿಣ ಮತ್ತು ಪಶ್ಚಿಮ ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆಯು ಭಾರೀ ಮಳೆಯ ಎಚ್ಚರಿಕೆ ನೀಡಿದೆ.

ಗೋವಾಕ್ಕೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾನುವಾರದವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಹೆಚ್ಚಾಗಿದೆ. ಮಲೆನಾಡು ರಾಜ್ಯಗಳಲ್ಲೂ ಗುಡುಗು, ಮಿಂಚು ಸಹಿತ ಮಳೆಯಾಗಿದೆ.

ಮುಂಬೈನಲ್ಲಿ ಮೇ 25ರಿಂದ 27ರವರೆಗೆ 3 ದಿನಗಳವರೆಗೆ ಭಾರೀ ಮಳೆಯಾಗಲಿದೆ.

ನೈಋತ್ಯ ಮಾನ್ಸೂನ್ ಇಂದು ಅಧಿಕೃತವಾಗಿ ಕೇರಳಕ್ಕೆ ಆಗಮಿಸಿದ್ದು, ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಆಲಪ್ಪುಳ, ತ್ರಿಶೂರ್, ಇಡುಕ್ಕಿ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.

ಕರ್ನಾಟಕದ ಕರಾವಳಿಯಲ್ಲಿ ರೆಡ್ ಅಲರ್ಟ್‌;
ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶದಿಂದಾಗಿ ಕರ್ನಾಟಕದಾದ್ಯಂತ ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ (ಹವಾಮಾನ ಇಲಾಖೆ) ನೀಡಿದೆ. ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮೇ 27ರವರೆಗೆ ಬಿರುಗಾಳಿ ಸಹಿತ ಅತ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕೊಂಚ ನಿಯಂತ್ರಣಕ್ಕೆ ಬರಲಿದೆ.

ಬೆಳಗಾವಿ ಮತ್ತು ಧಾರವಾಡದಲ್ಲಿ ಕೂಡ ಅಲರ್ಟ್ ಘೋಷಿಸಿದ್ದು, ಬಳ್ಳಾರಿ, ಬೆಂಗಳೂರು (ಗ್ರಾಮೀಣ ಮತ್ತು ನಗರ), ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು ಮತ್ತು ಇತರ ಒಳನಾಡಿನ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ. ಮೇ 25ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ.ಹವಾಮಾನ ಇಲಾಖೆಯ ಮುನ್ಸೂಚನೆಯ ಅವಧಿಯಲ್ಲಿ ಮಳೆಯೊಂದಿಗೆ ಬಿರುಗಾಳಿ ಬೀಸಲಿದ್ದು, ಹಲವಾರು ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!