ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು & ಕಾಶ್ಮೀರದ ಪೂಂಚ್ ಜಿಲ್ಲೆ ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.
ಪಾಕ್ ಗಡಿಯಾಚೆಗಿನ ಶೆಲ್ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ದುಃಖಿತ ಕುಟುಂಬಗಳನ್ನು ಭೇಟಿ ಮಾಡಿದರು. ರಾಹುಲ್ ಗಾಂಧಿ ಶಾಲಾ ಮಕ್ಕಳೊಂದಿಗೆ ಸಂವಹನ ನಡೆಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸಿದರು.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪೂಂಚ್ನ ಶಾಲೆಗೆ ಭೇಟಿ ನೀಡಿ ಗಡಿಯಾಚೆಯಿಂದ ಪಾಕಿಸ್ತಾನಿ ಶೆಲ್ ದಾಳಿಯಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ನೀವು ಅಪಾಯವನ್ನು ಮತ್ತು ಸ್ವಲ್ಪ ಭಯಾನಕ ಪರಿಸ್ಥಿತಿಯನ್ನು ನೋಡಿದ್ದೀರಿ, ಆದರೆ ಚಿಂತಿಸಬೇಡಿ, ಎಲ್ಲವೂ ಸರಿಯಾಗುತ್ತದೆ. ಈ ಸಮಸ್ಯೆಯನ್ನು ನಿಭಾಯಿಸುವ ನಿಮ್ಮ ಮಾರ್ಗವೆಂದರೆ ಕಷ್ಟಪಟ್ಟು ಓದುವುದು, ಶಾಲೆಯಲ್ಲಿ ಬಹಳಷ್ಟು ಸ್ನೇಹಿತರನ್ನು ಮಾಡಿಕೊಳ್ಳಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಗುರುದ್ವಾರಕ್ಕೂ ಭೇಟಿ
ಪಾಕಿಸ್ತಾನದ ಶೆಲ್ ದಾಳಿಗೆ ಒಳಗಾಗಿದ್ದ ಪ್ರಮುಖ ಧಾರ್ಮಿಕ ಸ್ಥಳ ಪೂಂಚ್ ಜಿಲ್ಲೆಯ ಗುರುದ್ವಾರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.