ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಹಿಂದಿ, ಮೊದಲಾದ ಸಿನಿಮಾದಲ್ಲಿ ನಟಿಸಿದ್ದ ಮುಕುಲ್ ದೇವ್ (54) ಇಂದು ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಮುಕುಲ್ ದೇವ್ ಅಸ್ವಸ್ಥರಾಗಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆದರೆ ಸಾವಿಗೆ ನಿಖರವಾದ ಕಾರಣ ಏನು ಎಂದು ತಿಳಿದು ಬಂದಿಲ್ಲ.
ಕನ್ನಡ ಸೇರಿದಂತೆ ಹಿಂದಿ, ಮಲಯಾಳಂ, ಪಂಜಾಬಿ, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದರು. ಕನ್ನಡದ ಉಪೇಂದ್ರ ನಟನೆಯ ರಜನಿ, ರಮ್ಯಾ ನಟನೆಯ ನಾಗರಹಾವು ಹಾಗೂ ಹಿಂದಿಯ ಸನ್ ಆಫ್ ಸರ್ದಾರ್ ಸಿನಿಮಾಗಳಲ್ಲಿ ನಟಿಸಿ ಖ್ಯಾತಿಗಳಿಸಿದ್ದರು. ಜೊತೆಗೆ ಸೀರಿಯಲ್ ಹಾಗೂ ವೆಬ್ ಸೀರಿಸ್‌ಗಳಲ್ಲಿಯೂ ನಟನೆ ಮಾಡಿದ್ದರು. 60ಕ್ಕೂ ಸಿನಿಮಾಗಳಲ್ಲಿ ನಟಿಸಿದ್ದ ಇವರು ಕೊನೆಯದಾಗಿ `ಅಂತ್ ದಿ ಎಂಡ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.