ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಗಾಳಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಕಬ್ಬಚೀರ ಉತ್ತಪ್ಪ ಅವರ ಲೈನ್’ಮನೆಯಲ್ಲಿ ವಾಸವಿದ್ದ ಗೌರಿ (50) ಎಂಬವರೇ ಸಾವಿಗೀಡಾದವರು.
ಶನಿವಾರ ಸಂಜೆ ತಮ್ಮ ಮನೆಯ ಹೊರಭಾಗದಲ್ಲಿ ಪಾತ್ರೆ ತೊಳೆಯುತ್ತಿದ್ದಾಗ ಅವರ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.
ವೀರಾಜಪೇಟೆ ತಶೀಲ್ದಾರವರು, ಕಂದಾಯ ಪರಿವೀಕ್ಷಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಇತರರು ಭೇಟಿ