ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್ವುಡ್ ಆರ್ಸಿಬಿ ತಂಡಕ್ಕೆ ಮತ್ತೆ ಮರಳಿದ್ದಾರೆ. ಭುಜದ ನೋವಿನ ಕಾರಣ ಕಳೆದ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಹೇಝಲ್ವುಡ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಜೋಶ್ ಹೇಝಲ್ವುಡ್ ಭುಜದ ನೋವಿಗೆ ತುತ್ತಾಗಿದ್ದರು. ಹೀಗಾಗಿ ಅವರು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾದ ಬಳಿಕ ಐಪಿಎಲ್ ಸ್ಥಗಿತಗೊಂಡಿದ್ದರಿಂದ ಅವರು ಆಸ್ಟ್ರೇಲಿಯಾಗೆ ತೆರಳಿದ್ದರು.
ಆದರೆ ಆ ಬಳಿಕ ಐಪಿಎಲ್ ಆರಂಭವಾದರೂ ಜೋಶ್ ಹೇಝಲ್ವುಡ್ ಬ್ರಿಸ್ಬೇನ್ನಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್ಆಗಿರುವ ಅವರು ಐಪಿಎಲ್ಗಾಗಿ ಆಗಮಿಸಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯಕ್ಕೆ ಹೇಝಲ್ವುಡ್ ಲಭ್ಯರಿರಲಿದ್ದಾರೆ. ಇದೀಗ ನಿರ್ಣಾಯಕ ಪಂದ್ಯಗಳಿಗೂ ಮುನ್ನ ಅವರ ಆಗಮನದಿಂದಾಗಿ ಆರ್ಸಿಬಿ ತಂಡಕ್ಕೆ ಆನೆಬಲ ಬಂದಂತಾಗಿದೆ.