ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಆರ್ಥಿಕ ಶ್ರೇಯಾಂಕದಲ್ಲಿ ಭಾರತ, ಜಪಾನ್ನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ.
ಈ ಮಾಹಿತಿಯನ್ನು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಬಹಿರಂಗಪಡಿಸಿದ್ದಾರೆ. ಶನಿವಾರ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿಯ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಭಾರತದ ಆರ್ಥಿಕತೆ ಈಗ 4 ಟ್ರಿಲಿಯನ್ ಡಾಲರ್ ಆಗಿದೆ. ಭಾರತ ಈಗ ಜಪಾನ್ಗಿಂತ ದೊಡ್ಡ ಆರ್ಥಿಕತೆ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.
ಅಮೆರಿಕ, ಚೀನಾ ಮತ್ತು ಜರ್ಮನಿ ಬಳಿಕ ಭಾರತ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ದೇಶೀಯ ಸುಧಾರಣೆಗಳು ಮತ್ತು ಭಾರತದ ಪರವಾಗಿ ಹೆಚ್ಚು ಹೆಚ್ಚು ಒಲವಿನಿಂದ ಆರ್ಥಿಕತೆ ಬಲಿಷ್ಠವಾಗಿದೆ.