ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯ 18 ಶಾಸಕರ ಅಮಾನತು ಆದೇಶ ಹಿಂಪಡೆಯಲು ಚಿಂತನೆ ನಡೆದಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವುದೇ ಪಕ್ಷವಿರಲಿ ಸಂವಿಧಾನ ಪೀಠಕ್ಕೆ ಗೌರವ ನೀಡಬೇಕು. ಪೀಠಕ್ಕೆ ಆಗೌರವ ನೀಡಿದ ಹಿನ್ನೆಲೆಯಲ್ಲಿ ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಆದ್ರೆ ಅಮಾನತಾದ ಶಾಸಕರೂ ನಮ್ಮವರೇ. ಹಾಗಾಗಿ ಎಲ್ಲರೂ ಸೇರಿ ವಿಚಾರವನ್ನು ಇತ್ಯರ್ಥಗೊಳಿಸುತ್ತೇವೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ಶಾಸಕರು, ಪ್ರತಿಪಕ್ಷದ ನಾಯಕರು ಹಾಗೂ ಬಹಳಷ್ಟು ನಾಯಕರು ಚರ್ಚೆಯ ಸಂದರ್ಭ ಏನೋ ಹೆಚ್ಚು ಕಮ್ಮಿಯಾಗಿದೆ. ಅಮಾನತು ಆದೇಶವನ್ನು ಹಿಂಪಡೆಯಿರಿ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಆಮಾನತನ್ನು ಹಿಂಪಡೆಯಲು ಆಲೋಚನೆ ನಡೆದಿದ್ದು, ಅದರಂತೆ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಇತರರ ಜತೆ ಇಂದು ಸಂಜೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಯಾವುದೋ ಸಂದರ್ಭದಲ್ಲಿ ಹೆಚ್ಚುಕಡಿಮೆಯಾಗುತ್ತದೆ. ಆರು ತಿಂಗಳ ಕಾಲ 18 ಮಂದಿ ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಅದರಲ್ಲಿ ಈಗಾಗಲೇ ಎರಡು ತಿಂಗಳು ಮುಗಿದಿದೆ. ಈ ದೇಶದಲ್ಲಿ ಎಂಥವರಿಗೂ ಕ್ಷಮೆಯಿದೆ. ಶಾಸಕರು ನಮ್ಮವರೇ. ಹಾಗಾಗಿ ಎಲ್ಲರೂ ಸೇರಿ ವಿಚಾರವನ್ನು ಇತ್ಯರ್ಥಗೊಳಿಸುತ್ತೇವೆ ಎಂದರು.