ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆ , ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣನ ಅಬ್ಬರಕ್ಕೆ ಶಿರಾಡಿಘಾಟ್ ರಸ್ತೆಯ ದೋಣಿಗಲ್ ಪರಿಸರದಲ್ಲಿ ಭೂ ಕುಸಿತ ಉಂಟಾದ ಬೆನ್ನಿಗೆ ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಟ್ರಾಫಿಕ್ ಜಾಮ್ ನಿಂದಾಗಿ ಕಿಲೋಮೀಟರ್ಗಟ್ಟಲೆ ಎರಡು ಕಡೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ವಾಹನಗಳು ಟ್ರಾಫಿಕ್ನಲ್ಲಿ ಸಿಲುಕಿದ್ದರಿಂದ ಬದಲಿ ಮಾರ್ಗದಲ್ಲಿ ವಾಹನಗಳು ಸಂಚಾರ ಮಾಡಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಹಾರ್ಲೆ ಮಾರ್ಗವಾಗಿ ಹಾನುಬಾಳು ರಸ್ತೆಯ ಮೂಲಕ ಸಕಲೇಶಪುರದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುವಂತೆ ವಾಹನ ಸವಾರರಿಗೆ ಸೂಚನೆ ನೀಡಿದ್ದಾರೆ.