ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ನಡೆದಿದೆ.
ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ. ಮೃತರ ಗುರುತು ಪತ್ತೆ ಆಗಿಲ್ಲ.
ಇನ್ನು ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.