ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಭೀಕರ ಹತ್ಯೆ: 1 ಕೋಟಿ ಮೌಲ್ಯದ ಚಿನ್ನಾಭರಣದೊಂದಿಗೆ ದುಷ್ಕರ್ಮಿಗಳು ಪರಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಬೆಂಗಳೂರಿನಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಅಂದಾಜು 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬೆಂಗಳೂರಿನ ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿನ ಮನೆಯೊಂದರಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಮನೆಯಲ್ಲಿ ಇದ್ದ ಮಹಿಳೆ ಲತಾ ಎನ್ನುವವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದ್ದು, ಅಂದಾಜು ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ದುಷ್ಕರ್ಮಿಗಳು, ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!