ಸಕಲೇಶಪುರ ಮಳೆ ಹಾನಿ ಪ್ರದೇಶಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ

ಹೊಸದಿಗಂತ ವರದಿ ಹಾಸನ :

ಹಾಸನ ಜಿಲ್ಲೆಯಲ್ಲಿ ಮುಂದುವರಿದ ವರುಣನ ಅಬ್ಬರ ಮುಂದುವರೆದಿದ್ದು, ಮಳೆ ಹಾನಿ ಹಾಗೂ ಭೂಕುಸಿತ ಪ್ರದೇಶಗಳಿಗೆ ಇಂದು ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಲಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಬಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದಲ್ಲಿ ಹಲವೆಡೆ ಭೂಕುಸಿತ ಉಂಟಾಗಿದೆ. ಮಳೆಯಿಂದ ಮನೆಗಳಿಗೆ ಹಾನಿ, ಹಲವು ಅನಾಹುತ ಸಂಭವಿಸಿರುವ ಹಿನ್ನಲೆ ಸಕಲೇಶಪುರ ತಾಲ್ಲೂಕಿನ, ಆನೆಹಮಲ್, ದೊಡ್ಡತಪ್ಪಲು ಮತ್ತು ಇತರೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಆರ್.ಅಶೋಕ್ ನೀಡಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿರುವ ಆನೆಮಹಲ್, ದೊಡ್ಡತಪ್ಪಲು ಬಳಿ ಉಂಟಾಗಿರುವ ಭೂ ಕುಸಿತ ಪ್ರದೇಶಗಳಿಗೆ ಮಧ್ಯಾಹ್ನ 12 ಗಂಟೆಗೆ ಸ್ಥಳಕ್ಕೆ ಆಗಮಿಸಲಿದ್ದಾರೆ.

ಧಾರಾಕಾರ ಮಳೆಯ ನಡುವೆಯೂ ಕಾಡಾನೆಗಳ ಹಾವಳಿ : ಬೇಲೂರು ತಾಲ್ಲೂಕಿನ, ಕೋಗೋಡು ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿಸಲಗ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ರೈತರೊಬ್ಬರು ಮರವೇರಿ ಪ್ರಾಣ ಉಳಿಸಿಕೊಂಡಿದ್ದಾರೆ. ಅಪಾರ ಪ್ರಮಾಣದ ಬೆಳೆ ನಾಶ ಮಾಡಿರುವ ಕಾಡಾನೆ ಕಾಫಿ, ಅಡಿಕೆ ಗಿಡಗಳನ್ನು ಕಿತ್ತು ಬಿಸಾಡಿದೆ. ಕಾಫಿ ತೋಟದಲ್ಲೇ ಬಿಡುಬಿಟ್ಟಿರುವ ಕಾಡಾನೆ ಚಲನವಲನ ಗಮನಿಸಲು ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೇಮಾವತಿ ಜಲಾಶಯಕ್ಕೆ ಒಳಹರಿವಿನಲ್ಲಿ ಭಾರಿ ಏರಿಕೆ: ಸಕಲೇಶಪುರ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಬಾರಿ ಮಳೆ ಹಿನ್ನಲೆ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಒಂದೇ ದಿನಕ್ಕೆ 8,004 ಕ್ಯೂಸೆಕ್ ಒಳಹರಿವೀನಲ್ಲಿ ಹೆಚ್ಚಳ ಕಂಡಿದೆ.

ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ : ಎಡೆಬಿಡದೆ ಸುರಿಯುತ್ತಿರುವ ಮಳೆಗೆ ವಾಹನ ಸವಾರರು, ವಿದ್ಯಾರ್ಥಿಗಳು, ಸಾರ್ವಜನಿಕರು, ಬೀದಿ ಬದಿ ವ್ಯಾಪಾರಿಗಳ ಪರದಾಡುವಂತಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದಲ್ಲಿ ವರಣುನ ಅಬ್ಬರಕ್ಕೆ ನಲುಗಿದ ಜನರು ಮನೆಯಿಂದ ಹೊರ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರವಾಗಿ ಮಳೆಯಾಗುತ್ತಿದ್ದರು ಜಿಲ್ಲಾಡಳಿತ ಶಾಲಾ, ಕಾಲೇಜುಗಳಿಗೆ ರಜೆ ನೀಡದ ಕಾರಣ ಮಳೆಯಲ್ಲಿಯೇ ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ.

ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ

ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ – 37.103 ಟಿಎಂಸಿ
ಸದ್ಯ ಜಲಾಶಯದಲ್ಲಿರುವ ನೀರು – 20.881 ಟಿಎಂಸಿ
ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2901.80 ಅಡಿ
ಒಳಹರಿವು – 17812 ಕ್ಯೂಸೆಕ್
ಹೊರಹರಿವು – 3225 ಕ್ಯೂಸೆಕ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!