ಅಮೃತಸರದಲ್ಲಿ ಬಿಗ್‌ ಬ್ಲಾಸ್ಟ್: ‘ಶಂಕಿತ’ ಭಯೋತ್ಪಾದಕ ಸಂಘಟನೆಗೆ ಸೇರಿದ ವ್ಯಕ್ತಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಅಮೃತಸರದ ಮಜಿತಾ ರಸ್ತೆಯ ಬಳಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಭಯೋತ್ಪಾದಕ ಸಂಘಟನೆಗೆ ಸೇರಿದವನೆಂದು ಶಂಕಿಸಲಾದ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಸರ ಗ್ರಾಮೀಣ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣಿಂದರ್ ಸಿಂಗ್ ಮಾತನಾಡಿ, ಆ ವ್ಯಕ್ತಿ ಕೆಲವು ಸ್ಫೋಟಕ ವಸ್ತುಗಳನ್ನು ಹೊರತೆಗೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಬಹುಶಃ ಅದನ್ನು ಸರಿಯಾಗಿ ನಿರ್ವಹಿಸದ ಕಾರಣ ಈ ಘಟನೆ ಸಂಭವಿಸಿದೆ ಎಂದರು.

ಆ ವ್ಯಕ್ತಿ ಯಾವುದೋ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರಬಹುದು. ಅಳವಡಿಸಲಾಗಿದ್ದ ಸ್ಫೋಟಕ ವಸ್ತುಗಳನ್ನು ಹಿಂಪಡೆಯಲು ಆತ ಇಲ್ಲಿಗೆ ಬಂದಿದ್ದ’ ಎಂದು ಎಸ್‌ಎಸ್‌ಪಿ ಹೇಳಿದರು.

ಸ್ಫೋಟಕ ವಸ್ತುವಿನ ಮಾದರಿಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳಕ್ಕೆ ಆಗಮಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೋರಾದ ಸ್ಫೋಟದ ಶಬ್ದ ಸ್ಥಳೀಯರಿಗೆ ಕೇಳಿಸಿದೆ. ನಂತರ ಆ ಪ್ರದೇಶದಲ್ಲಿ ಭೀತಿ ಉಂಟಾಗಿದ್ದು, ಆಗಿನಿಂದ ಪೊಲೀಸರು ಆ ಪ್ರದೇಶವನ್ನು ಸುತ್ತುವರೆದಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!