ಹೊಸದಿಗಂತ ವರದಿ ಯಾದಗಿರಿ:
ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಡಿ ಸುರಿದ ಧಾರಾಕಾರ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿನ ಹಲವು ಮನೆಗಳು ಜಲಾವೃತಗೊಂಡಿವೆ.
ಶಹಾಪುರು ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಾಬಮ್ಮ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ಜಲಾವೃತಗೊಂಡಿದೆ. ರಾತ್ರಿ ಇಡೀ ಮನೆಯೊಳಗೆ ನುಗ್ಗಿದ ನೀರು, ಮಳೆ ನೀರು ಹೊರಹಾಕಲು ಕುಟುಂಬಸ್ಥರು ಹರಸಾಹಸ ಪಟ್ಟಿದ್ದಾರೆ.
ಮಳೆ ನೀರಿನಲ್ಲಿ ದವಸ-ಧಾನ್ಯಗಳು ನಾಶ, ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆ ನೀರಿನಲ್ಲಿ ಮನೆಯ ಕೊಚ್ಚಿ ಹೋಗಿವೆ. ಸ್ಥಳಕ್ಕೆ ತಹಶಿಲ್ದಾರ, ವಿಲೇಜ್ ಅಕೌಂಟೆಂಟ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.