ನಟ ಕಮಲ್ ಹಾಸನ್ ಕೊಟ್ಟ ಆ ಒಂದು ಸ್ಟೇಟ್ಮೆಂಟ್ ಗೆ ರೊಚ್ಚಿಗೆದ್ದ ಕನ್ನಡಿಗರು! ಏನದು ಮಾತು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಲಿವುಡ್ ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಇದೆ ಜೂನ್ 5ರಂದು ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಇಂದು ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ, ಕಮಲ್ ಹಾಸನ್ ನೀಡಿದ ಆ ಒಂದು ಸ್ಟೇಟ್ಮೆಂಟ್ ಗೆ ಕನ್ನಡಿಗರು ಇದೀಗ ಗರಂ ಆಗಿದ್ದಾರೆ.

ಹೌದು, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರು ರಾಂಗ್ ಆಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕಮಲ್ ಹಾಸನ್ ಈ ಹೇಳಿಕೆಗೆ ಕನ್ನಡಿಗರು ಫುಲ್ ಕಿಡಿಕಾರಿದ್ದಾರೆ.

ಕಮಲ್ ಆಡಿರುವ ಮಾತುಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ತಿರುಗೇಟು ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!