ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮರ್ಮುರಿಂದ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಸಿನಿಮಾರಂಗದಲ್ಲಿ ಅಪಾರ ಸಾಧನೆ ಮಾಡಿರುವ ಅನಂತ್ ನಾಗ್ ಅವರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಿರಿಯ ನಟನಿಗೆ ಸಿಕ್ಕಿರುವ ಪ್ರಶಸ್ತಿಗೆ ಅವರ ಅಭಿಮಾನಿಗಳು ಶುಭಹಾರೈಸಿದ್ದಾರೆ.
ಅನಂತ್ ನಾಗ್ ಅವರು ಕನ್ನಡ, ಹಿಂದಿ, ಮರಾಠಿ ಸೇರಿದಂತೆ 300ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಾರೆ. ರಂಗಭೂಮಿಯಲ್ಲೂ ಕೂಡ ನಟಿಸಿ ಸೈ ಎನಿಸಿಕೊಂಡಿದ್ದಾರೆ.