ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆಬದಿಯ ಪಾರ್ಕಿಂಗ್‌ನಿಂದ ನಗರದಲ್ಲಿ ಉಂಟಾಗುವ ಸಂಚಾರ ದಟ್ಟಣೆಯ ಸಮಸ್ಯೆಯನ್ನು ಪರಿಹರಿಸಲು ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು ಸರ್ಕಾರ ಮುಂದಾಗಿದೆ.
ರಸ್ತೆಬದಿಯಲ್ಲಿ ನಿಲ್ಲಿಸಲಾದ ವಾಹನಗಳು, ವಿಶೇಷವಾಗಿ ದ್ವಿಚಕ್ರ ವಾಹನಗಳು ಸಂಚಾರ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದರಿಂದ ನಗರದಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮಳೆಗಾಲದಲ್ಲಿ ಸಮಸ್ಯೆ ಉಲ್ಬಣಗೊಳ್ಳುತ್ತದೆ. ನಗರದ 19 ಸ್ಥಳಗಳಲ್ಲಿ ಭಾರೀ ದಟ್ಟಣೆ ಉಂಟಾಗುತ್ತದೆ, ಸಿಲ್ಕ್ ಬೋರ್ಡ್ ಮತ್ತು ಹೆಬ್ಬಾಳ ಜಂಕ್ಷನ್ ಸೇರಿದಂತೆ ಎಂಟು ಸ್ಥಳಗಳಲ್ಲಿ ಪರಿಸ್ಥಿತಿ ಕೆಟ್ಟದಾಗಿರುತ್ತದೆ. ಈ ಹಿಂದೆ, ರಸ್ತೆಬದಿಯ ಪಾರ್ಕಿಂಗ್ ಅನ್ನು ತಪ್ಪಿಸಲು, ಟೋಯಿಂಗ್ ವ್ಯವಸ್ಥೆ ಜಾರಿಯಲ್ಲಿತ್ತು. ಇದೀಗ ಮತ್ತೆ ಆ ವ್ಯವಸ್ಥೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಹಿಂದೆ, ಟೋಯಿಂಗ್ ಅನ್ನು ಖಾಸಗಿ ನಿರ್ವಾಹಕರ ಮೂಲಕ ನಡೆಸಲಾಗುತ್ತಿತ್ತು, ಆದರೆ, ಈ ಬಾರಿ ಅದನ್ನು ಪೊಲೀಸ್ ಇಲಾಖೆ ನಿರ್ವಹಿಸುತ್ತದೆ. ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಅಧಿಕಾರಿಗಳೊಂದಿಗೆ ವಿವಿಧ ಕ್ರಮಗಳ ಕುರಿತು ಚರ್ಚಿಸಿದ್ದೇನೆ ಎಂದು ತಿಳಿಸಿದರು.