ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ: ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಮ್ಮ ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ನಗರದ ಟೌನ್ ಹಾಲ್ ನಲ್ಲಿ ಬುಧವಾರ ನಡೆದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ ಹಿರಿಯ ಸೇನಾಧಿಕಾರಿಗಳು ಹಾಗೂ ಮಾಜಿ ಯೋಧರು, ಹುತಾತ್ಮರಾದ ಯೋಧರ ಕುಟುಂಬ ಸದಸ್ಯರನ್ನು ಸನ್ಮಾನಿಸಿದ ನಂತರ ಶಿವಕುಮಾರ್ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸೈನಿಕರ ವಿಭಾಗದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರ ಸಲಹೆ ಮೇರೆಗೆ ಕಾರ್ಪೊರೇಷನ್ ರಚಿಸಲು ಆಲೋಚಿಸುತ್ತಿದ್ದೇವೆ. ನಮ್ಮ ದೇಶಕ್ಕೆ ಸೇವೆ ಸಲ್ಲಿಸಿರುವ ಯೋಧರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಇಂತಹ ಅತ್ಯಂತ ಮಹತ್ವದ ಕಾರ್ಯಕ್ರಮದ ಭಾಗವಾಗಿರುವುದು ಹೆಮ್ಮೆಯ ವಿಚಾರ. ದೇಶಕ್ಕೆ ಶಕ್ತಿ ತುಂಬಿರುವ ನಿಮ್ಮಲ್ಲರಿಗೆ ದೇಶ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕಾಂಗ್ರೆಸ್ ಪಕ್ಷ ಸದಾ ದೇಶ ಹಾಗೂ ನಮ್ಮ ಸಶಸ್ತ್ರ ಪಡೆಗಳ ಪರವಾಗಿ ನಿಲ್ಲಲಿದೆ. ನಿಮ್ಮ ಕೊಡುಗೆಯನ್ನು ಸದಾ ಸ್ಮರಿಸಲಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!