ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಮಲ್ ಹಾಸನ್ ವಿರುದ್ಧ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ನಟ ಮತ್ತೆ ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ನಾನು ಹೇಳಿದ್ದು ನನ್ನ ಪ್ರಕಾರ ಸರಿ, ನಾನು ಕ್ಷಮೆ ಕೇಳಲ್ಲ ಎಂದು ಉದ್ಧಟತನ ಮೆರೆದಿದ್ದಾರೆ.
ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಷೆ ಬಗ್ಗೆ ಮಾತಾಡಲು ರಾಜಕಾರಣಿಗಳಿಗೆ ಅರ್ಹತೆ ಇಲ್ಲ. ಅನೇಕ ಇತಿಹಾಸಕಾರರು ನನಗೆ ಭಾಷಾ ಇತಿಹಾಸವನ್ನು ಕಲಿಸಿದ್ದಾರೆ. ತಮಿಳುನಾಡು ಒಂದು ವಿಶಾಲ ಹೃದಯ ರಾಜ್ಯ. ಒಬ್ಬ ಮೆನನ್ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ಒಬ್ಬ ರೆಡ್ಡಿ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ಒಬ್ಬ ತಮಿಳರು ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ಒಬ್ಬ ಕನ್ನಡಿಗ ಅಯ್ಯಂಗಾರ್ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ನಾನು ಸಮಸ್ಯೆಗೆ ಸಿಲುಕಿದಾಗ ನನಗೆ ಬೆಂಬಲವಾಗಿ ಕನ್ನಡಿಗರು ನಿಂತಿದ್ರು. ಚೆನ್ನೈನಲ್ಲಿ ಸಮಸ್ಯೆ ಆದಾಗ ಕನ್ನಡಿಗರು ಸಪೋರ್ಟ್ ಮಾಡಿದ್ರು. ನನ್ನ ಸಿನಿಮಾಗಳನ್ನ ಅಭಿಮಾನಿಗಳು ನೋಡ್ತಾರೆ, ರಾಜಕಾರಣಿಗಳಿಗೆ ಭಾಷಾ ಜ್ಞಾನ ಇಲ್ಲ. ನನ್ನ ಪ್ರಕಾರ ನನ್ನ ಹೇಳಿಕೆ ಸರಿ ಇದೆ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.