ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು ಅನುಮತಿ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ಆದೇಶವನ್ನು ಕೋರ್ಟ್ ಮೇ 30 ಕ್ಕೆ ಕಾಯ್ದಿರಿಸಿದೆ.
ಇಂದು ಅರ್ಜಿ ವಿಚಾರಣೆ ನಡೆಸಿದ 64ನೇ ಸಿಸಿಎಚ್ ಕೋರ್ಟ್ ವಾದ-ಪ್ರತಿವಾದ ಆಲಿಸಿ ಮೇ 30ಕ್ಕೆ ಆದೇಶ ಕಾಯ್ದಿರಿಸಿದೆ.
ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಜೂನ್ 1ರಿಂದ ಜೂನ್ 25ರ ವರೆಗೆ ಅವಕಾಶಕ್ಕಾಗಿ ದರ್ಶನ್ ಮನವಿ ಸಲ್ಲಿಸಿದ್ದರು. ದರ್ಶನ್ ಅರ್ಜಿಗೆ ಎಸ್‌ಎಸ್‌ಪಿ ಆಕ್ಷೇಪಣೆ ಸಲ್ಲಿಸಿದ್ದರು.