ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು ಹೊಸದಾಗಿ 40 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸಕ್ರೀಯ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 344 ಹಾಗೂ ರಾಟ್ ಮೂಲಕ 51 ಸೇರಿದಂತೆ 395 ಜನರನ್ನು ಕೋವಿಡ್ ಪತ್ತೆ ಪರೀಕ್ಷೆಗೆ ಒಳಪಡಿಸಿರುವುದಾಗಿ ತಿಳಿಸಿದೆ.
395 ಜನರಲ್ಲಿ 40 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಕೋವಿಡ್ ಸೋಂಕಿತರಾದಂತ 14 ಮಂದಿ ಗುಣಮುಖರಾಗಿದ್ದಾರೆ.