ಹೊಸದಿಗಂತ ಡಿಜಿಟಲ್ ಡೆಸ್ಕ್:
ತಂಬಾಕು ವ್ಯಾಪಾರಿಗಳು ಬಿಬಿಎಂಪಿಯಿಂದ ಲೈಸೆನ್ಸ್ ಪಡೆಯುವುದು ಕಡ್ಡಾಯವಾಗಿದ್ದು, ಪರವಾನಗಿ ಇಲ್ಲದೆ ತಂಬಾಕು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು, ಮೇ 31 ರಂದು ವಿಶ್ವ ಧೂಮಪಾನ ನಿಷೇಧ ದಿನ’ದ ಪ್ರಯುಕ್ತ ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ಮತ್ತು ತಂಬಾಕು ನಿಯಂತ್ರಣ ಕಾನೂನುಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಗರ ಪೊಲೀಸರು ಬೆಂಗಳೂರಿನಾದ್ಯಂತ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆಂದು ಹೇಳಿದರು.
ತಂಬಾಕು ಮುಕ್ತ ವಾತಾವರಣವನ್ನು ಉತ್ತೇಜಿಸಲು ಪ್ರಯತ್ನ ನಡೆಸಲಾಗುತ್ತಿದ್ದು, ಎಲ್ಲಾ ತಂಬಾಕು ವ್ಯಾಪಾರಿಗಳು ಮಾನ್ಯ ಪರವಾನಗಿಯನ್ನು ಹೊಂದಿರಬೇಕು. ಮೇ 27 ರಿಂದ ಜೂನ್ 2 ರವರೆಗೆ, ಪೊಲೀಸ್ ಇಲಾಖೆ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ, 2003 ಜಾರಿಗೊಳಿಸುವಿಕೆಯನ್ನು ತೀವ್ರಗೊಳಿಸಲಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಮತ್ತು ಶಿಕ್ಷಣ ಸಂಸ್ಥೆಗಳ ಬಳಿ ತಂಬಾಕು ಮಾರಾಟ ಮಾಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹವರ ವಿರುದ್ದ ಕೋಟ್ಟಾ ಕಾಯ್ದೆಯಡಿ ಪ್ರಕರಣ ದಾಖಲಿಸಲಿದ್ದಾರೆ ಎಂದು ತಿಳಿಸಿದರು.