ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಲ್ಲಿ ತಾತ್ಕಾಲಿಕ ರಿಲೀಫ್ ದೊರೆತಿದೆ.
ನ್ಯಾ.ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ಸುಮಾರು 3,400 ಕೋಟಿ ರೂ. ಅಭಿವೃದ್ಧಿ ಹಕ್ಕು ಪ್ರಮಾಣಪತ್ರ ಅಥವಾ ಟಿಡಿಆರ್ ಸರ್ಟಿಫಿಕೇಟ್ ಅನ್ನು ರಾಜಮನೆತನಕ್ಕೆ ಹಸ್ತಾಂತರ ಮಾಡಬೇಕೆಂದು ಈ ಹಿಂದೆ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಮರುಪರಿಶೀಲನಾ ಅರ್ಜಿಯ ಮುಂದಿನ ವಿಚಾರಣೆಯನ್ನು ಜುಲೈ 21ಕ್ಕೆ ಹಾಗೂ ಮುಖ್ಯ ಸಿವಿಲ್ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 18ಕ್ಕೆ ನಿಗದಿಪಡಿಸಿದೆ.
ಬಳ್ಳಾರಿ ಮತ್ತು ಜಯಮಹಲ್ ರಸ್ತೆಯ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಮಾಡಿದ್ದಕ್ಕೆ ಸಂಬಂಧಿಸಿದ್ದ ಪ್ರಕರಣ ಇದಾಗಿದೆ. ಟಿಡಿಆರ್ಗಳನ್ನು ರಾಜಮನೆತನಕ್ಕೆ ನೀಡಬಾರದು ಎಂದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು. ಆದರೆ, 3,400 ಕೋಟಿ ರೂ. ಟಿಡಿಆರ್ ಅನ್ನು ರಾಜಮನೆತನದವರಿಗೆ ನೀಡುವಂತೆ ಮೇ 22 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.