ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗಾಗಿ 42,000 ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿಯನ್ನೊಳಗೊಂಡ 580 ತುಕಡಿಗಳ ನಿಯೋಜನೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.
580 ತುಕಡಿಗಳ ಪೈಕಿ 424 ತುಕಡಿಗಳನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ. ಸುಮಾರು 80 ತುಕಡಿಗಳು ಸೇರಿದಂತೆ ಉಳಿದವುಗಳನ್ನು ಯಾತ್ರಾ ಮಾರ್ಗ, ಯಾತ್ರಿಕರು ಮತ್ತು ಶ್ರೀನಗರ ಮತ್ತಿತರ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗುವುದು ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಜೂನ್ ಎರಡನೇ ವಾರದೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗುವಂತೆ ಕೇಂದ್ರ ಗೃಹ ಸಚಿವಾಲಯ ಈ ಪಡೆಗಳಿಗೆ ಆದೇಶಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರನಾಥ ಯಾತ್ರೆಯು ಜುಲೈ 3 ರಂದು ಪ್ರಾರಂಭವಾಗಿ ಆಗಸ್ಟ್ 9 ರಂದು ಕೊನೆಗೊಳ್ಳಲಿದೆ.