ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಕಮಲ್ ಹಾಸನ್ ಕೊಟ್ಟ ಒಂದು ಹೇಳಿಕೆ ಇಡೀ ರಾಜ್ಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಕಮಲ್ ಸಿನಿಮಾಗಳನ್ನ ಬ್ಯಾನ್ ಮಾಡುವಂತೆ ಕನ್ನಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ.
ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿದ್ದು, ಕ್ಷಮೆ ಕೇಳಿಸುವ ಪ್ರಯತ್ನ ಮಾಡುವುದಾಗಿ ಹೇಳಿದೆ.
ಸಭೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು ಮಾತನಾಡಿ, ಇವತ್ತು ಅಥವಾ ನಾಳೆ ಒಳಗೆ ಕಮಲ್ ಹಾಸನ್ ಕ್ಷಮೆ ಕೇಳದೇ ಇದ್ರೆ ಖಂಡನೆ ಮಾಡ್ತೀವಿ. ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಮಾಡಿಕೊಡಲ್ಲ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.