‘ಕಮಲ್ ಹಾಸನ್ ಸಿನಿಮಾ ನಿಷೇಧ ಮಾಡಲು ಮುಂದಾಗಿರುವುದು ತುಸು ಅತಿರೇಕ ಅನಿಸುವುದಿಲ್ಲವೆ?’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಉಗಮದ ಬಗ್ಗೆ ಆಡಿರುವ ಮಾತುಗಳು ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿವೆ. ಕಮಲ್ ಅವರ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇದೀಗ ನಟಿ, ಮಾಜಿ ಸಂಸದೆ ರಮ್ಯಾ ಅವರು ಕಮಲ್ ಹಾಸನ್ ಅವರ ಹೇಳಿಕೆ ಬಗ್ಗೆ ರಿಯಾಕ್ಷನ್ ನೀಡಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟಿ ರಮ್ಯಾ, ಡ್ರಾವಿಡ ಭಾಷೆಗಳ ಉಗಮದ ಚಾರ್ಟ್ ಒಂದನ್ನು ಹಂಚಿಕೊಂಡಿದ್ದಾರೆ. “ದ್ರಾವಿಡ ಭಾಷೆಗಳ ಅಡಿಯಲ್ಲಿಯೇ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳು ಬರುತ್ತವೆ. ನಮ್ಮ ಭಾಷೆಗಳು ಪರಸ್ಪರ ಸಾಮ್ಯತೆಗಳನ್ನು ಹೊಂದಿವೆ ಆದರೆ ಯಾವ ಭಾಷೆಯೂ ಇನ್ನೊಂದು ಭಾಷೆಗಿಂತಲೂ ಶ್ರೇಷ್ಠ ಎಂದಿಲ್ಲ. ಏಕೆಂದರೆ ಸಂಸ್ಕೃತ ಇಂಡೋ-ಆರ್ಯನ್ ಭಾಷೆ. ಆದರೆ ನಾವು ದ್ರಾವಿಡರು. ಇಂಡೋ ಆರ್ಯನ್ನರು ಇಲ್ಲಿಗೆ ವಲಸೆ ಬರುವುದಕ್ಕೆ ಬಹಳ ವರ್ಷಗಳ ಮುಂಚೆಯೇ ನಾವು ಇಲ್ಲಿದ್ದೀವಿ” ಎಂದಿದ್ದಾರೆ.

‘ಕಮಲ್ ಹಾಸನ್ ಅವರು ಒಂದು ಹೇಳಿಕೆಯನ್ನು ನೀಡಿದ್ದಾರೆ. ಆದರೆ ಆ ಮಾತ್ರಕ್ಕೆ ಅವರ ಸಿನಿಮಾ ನಿಷೇಧ ಮಾಡಲು ಮುಂದಾಗಿರುವುದು ತುಸು ಅತಿರೇಕ ಅನಿಸುವುದಿಲ್ಲವೆ? ನಾವು ಪರಸ್ಪರರಿಗೆ ಗೌರವ ಕೊಡುವುದನ್ನು ಕಲಿಯಬೇಕಿದೆ” ಎಂದು ಹೇಳಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!